ಬೆಂಗಳೂರು,ಮೇ,5,2021(www.justkannada.in): ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿರುವ ಹಿನ್ನೆಲೆ ಜನತಾ ಕರ್ಫ್ಯೂ ಜಾರಿಯಲ್ಲಿದ್ದು ಲಾಕ್ ಡೌನ್ ವಿಚಾರ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ. ಪ್ರಧಾನಿ ಹೇಳಿದಂತೆ ಲಾಕ್ ಡೌನ್ ಮಾಡುತ್ತೇವೆ. ಮೋದಿಯಿಂದ ಬರುವ ಸಲಹೆ ಸೂಚನೆಗಳನ್ನ ಪಾಲಿಸುತ್ತೇವೆ. ಪ್ರಧಾನಿ ಮೋದಿ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ.
ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಸಲಿದ್ದು, ಕೊರೋನಾ ತಡಗಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡುತ್ತಾರೆಯೇ…? ಎಂಬ ಕುತೂಹಲ ಮೂಡಿದೆ.
Key words: We -waiting – PM Modi’s- direction-CM BS Yeddyurappa.