ಬೆಂಗಳೂರು. ಆಗಸ್ಟ್ 28, 2021 (www.justkannada.in): ಕೇರಳದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ.
ಕೋವಿಡ್-19 ಹರಡುವಿಕೆ ತಡೆಗಾಗಿ ಆಗಸ್ಟ್ 30 ರಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು.. ಭಾನುವಾರ ಲಾಕ್ ಡೌನ್ ಮುಂದಿನ ಆದೇಶದವರೆಗೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ತಿಳಿಸಿದ್ದಾರೆ.
ಲಾಕ್ ಡೌನ್ ಸಡಿಲಿಕೆಯಾದ ನಂತರ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಓಣಂ ಹಬ್ಬದ ಸಂದರ್ಭದಲ್ಲಿ ಇದು ವಿಪರೀತವಾಗಿದೆ. ಲಸಿಕಾ ಅಭಿಯಾನ ಸೇರಿದಂತೆ ಚಿಕಿತ್ಸಾ ಸೌಕರ್ಯವನ್ನು ಸರ್ಕಾರ ಹೆಚ್ಚಿಸಿದೆ ಎಂದು ಹೇಳಿದ್ದಾರೆ.
ಸೆರೋಪ್ರೆವೆಲೆನ್ಸ್ ಅಧ್ಯಯನದ ವರದಿಗಳ ಪ್ರಕಾರ, ರಾಜ್ಯದಲ್ಲಿ ಶೇ. 44.4 ರಷ್ಟು ಜನರು ಸೋಂಕಿಗೆ ತುತ್ತಾಗಿದ್ದಾರೆ.