ಪಶ್ಚಿಮ ಬಂಗಾಳ,ಮಾರ್ಚ್,5,2021(www.justkannada.in): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಟಿಎಂಸಿ ಪಕ್ಷ ತನ್ನ 291 ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದೆ.
ಟಿಎಂಸಿ ಪಕ್ಷ 291 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಸಿಎಂ ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸಲಿದ್ದಾರೆ. ಬಿಡುಗಡೆಯಾಗಿರುವ 291 ಆಭ್ಯರ್ಥಿಗಳ ಪೈಕಿ 50 ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. 79 ಎಸ್ಸಿ, 17 ಎಸ್ಸ್ಟಿ ಅಭ್ಯರ್ಥಿಗಳು, 42 ಮುಸ್ಲಿಂ ಅಭ್ಯರ್ಥಿಗಳು ಸೇರಿದಂತೆ 291 ಅಭ್ಯರ್ಥಿಗಳ ಪಟ್ಟಿಯನ್ನು ಟಿಎಂಸಿ ಪಕ್ಷ ಬಿಡುಗಡೆ ಮಾಡಿದೆ.
ಈ ಕುರಿತು ಮಾತನಾಡಿರುವ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಉತ್ತರ ಬಂಗಾಳದ 3 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳನ್ನ ನಾವು ಕಣಕ್ಕಿಳಿಸುತ್ತಿಲ್ಲ. ನಾನು ನಂದಿಗ್ರಾಮದಿಂದ ಸ್ಪರ್ಧಿಸುತ್ತೇನೆ. ಭವಾನಿಪುರ್ ಕ್ಷೇತ್ರದಿಂದ ಶೋಭನ್ದೇವ್ ಚಟರ್ಜಿ ಸ್ಪರ್ಧೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ಮಾರ್ಚ್ 27 ರಿಂದ ಪಂಚರಾಜ್ಯಗಳ ಚುನಾವಣೆ ಪ್ರಾರಂಭವಾಗಲಿದ್ದು ಪ.ಬಂಗಾಳ, ತಮಿಳುನಾಡು, ಪುದುಚೇರಿ, ಕೇರಳ, ಅಸ್ಸಾಂ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.
Key words: west Bengal -Assembly –Elections- TMC- releases- list -291 candidates