ಪಶ್ಚಿಮ ಘಟ್ಟದ ಪುಟ್ಟಹಳ್ಳಿಯ ಶಾಂತಾರಮ ಸಿದ್ಧ ಮೇಲ್ಮನೆಗೆ ನಾಮಕರಣ

ಬೆಂಗಳೂರು, ಜುಲೈ 22, 2020 (www.justkannada.in): ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಮ ಸಿದ್ದಿರವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ .

ಶಾಂತಾರಾಮ ಸಿದ್ಧಿ ಸಮುದಾಯದ ಮೊದಲ ಪದವಿಧರರು. ೭ ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತರು. ಪದವಿಯ ನಂತರ ವನವಾಸಿಗಳ ನಡುವೆ ಕೆಲಸ ಮಾಡಲು ವನವಾಸಿ ಕಲ್ಯಾಣಾಶ್ರಮದ ಪೂರ್ಣಾವಧಿ ಕಾರ್ಯಕರ್ತರಾದರು.

ಶಿರಸಿ – ಯಲ್ಲಾಪುರ ನಡುವಿನ ಹಿತ್ಲಳ್ಳಿ ಗ್ರಾಮದಲ್ಲಿನ ಪುಟ್ಟ ಮನೆಯಲ್ಲಿ ನೆಲಸಿರುವ ಶಾಂತಾರಾಮ ಸಿದ್ಧಿ ಈ ಹಿಂದೆ ಪಶ್ಛಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿದ್ದರು. ಕಾಲೇಜು ದಿನಗಳಿಂದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದವರು.