ಬೆಳಗಾವಿ,ಜೂನ್,15,2022(www.justkannada.in): ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಮಧ್ಯೆ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಕುರಿತು ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸತತ 8 ನೇ ಬಾರಿಗೆ ಗೆಲುವು ಸಾಧಿಸಿ ದಾಖಲೆ ಬರೆದಿದ್ದಾರೆ. ಹೊರಟ್ಟಿ ಗೆಲುವಿನ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾಡಲಿದೆ.
ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಬಸವರಾಜ ಗುರಿಕಾರ ಮತ್ತು ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ಗಡದಿನ್ನಿಗೆ ಮುಖಭಂಗವಾಗಿದೆ. ಮೊದಲ ಸುತ್ತಿನಲ್ಲಿ ಬಸವರಾಜ ಹೊರಟ್ಟಿಗೆ 6479 ಮತಗಳು ಕಾಂಗ್ರೆಸ್ ನ ಬಸವರಾಜ ಗುರಿಕಾರಗೆ 3314 ಬಂದಿದ್ದವು. ಈ ಮೂಲಕ ಹೊರಟ್ಟಿ 3165 ಮತಗಳ ಮುನ್ನಡೆ ಸಾಧಿಸಿದ್ದರು. ಇದೀಗ ಬಸವರಾಜ ಹೊರಟ್ಟಿ ಅವರು ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
Key words: Western- Teachers –Constituency- Election –Basavaraja horatti- win