ಬೆಂಗಳೂರು, 08, 2020 (www.justkannada.in): ಲಾಕ್ ಡೌನ್ ಆದೇಶ ಮುಗಿದ ಏನೆಲ್ಲಾ ಕ್ರಮವನ್ನು ಕೈಗೊಳ್ಳುತ್ತೀರಿ ಎಂಬ 10 ಕ್ರಮಗಳನ್ನು ದಿನಾಂಕ 09-04-2020ರ ಒಳಗಾಗಿ ಕಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್ ಎಲ್ಲಾ ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೊರೊನಾ ಸೋಂಕು ನಿವಾರಿಸುವ ನಿಟ್ಟಿನಲ್ಲಿ 21 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದ್ದರು. ಈ ಲಾಕ್ ಡೌನ್ ಏಪ್ರಿಲ್ 14ರಂದು ಅಂತ್ಯಗೊಳ್ಳಲಿದೆ. ಈ ಬಳಿಕ ರಾಜ್ಯದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬಹುದು..?
ಈ ಕುರಿತಂತೆ ರಾಜ್ಯದ ಎಲ್ಲಾ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳಿಗೆ ಟಿಪ್ಪಣಿಯಲ್ಲಿ ಸೂಚಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್, ಕೋವಿಡ್-19ರ ಸಾಂಕ್ರಾಮಿಕ ರೋಗವನ್ನು ಪರಿಣಾಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ವಿಧಿಸಲಾಗಿದ್ದ, ಲಾಕ್ ಡೌನ್ ಅವಧಿ ಏಪ್ರಿಲ್ 14, 2020ರಂದು ಮುಕ್ತಾಯವಾಗಲಿದೆ.
ಹೀಗಾಗಿ ಏಪ್ರಿಲ್ 14, 2020ರ ನಂತ್ರ, ತಮ್ಮ ಅಧೀನದಲ್ಲಿರುವ ಇಲಾಖೆಗಳಲ್ಲಿ ತೆಗೆದುಕೊಳ್ಳಬೇಕಾಗಿರುವ ಪ್ರಮುಖ 10 ಕ್ರಮಗಳ ಬಗ್ಗೆ ಪಟ್ಟಿ ಮಾಡಿ, ನನಗೆ ದಿನಾಂಕ 09-04-2020ರೊಳಗೆ ಕಳುಹಿಸುವಂತೆ ಸೂಚಿಸಿದ್ದಾರೆ.