ಮೈಸೂರು,ಸೆಪ್ಟೆಂಬರ್,26,2020(www.justkannada.in) : ಆರೋಗ್ಯ ಮಂತ್ರಿ ಯಾರು? ಎಂಬ ಗೊಂದಲವಿದೆ. ಕೊರೊನಾ ಕಾಣಿಸಿಕೊಂಡ ಆರಂಭದಿಂದಲೂ ಸಚಿವ ಶ್ರೀರಾಮುಲು ಹೇಳಿಕೆ ನೀಡಲೂ ಬಿಡುತ್ತಿಲ್ಲ. ಕೊರೊನಾ ನಿಯಂತ್ರಣ ಮಾಡಲು ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಮಾಜಿ ಸಂಸದ ಆರ್.ಧೃವನಾರಾಯಣ್ ಟೀಕಿಸಿದರು.
ಮೈಸೂರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ. ಈಗಲಾದರೂ ಸರ್ಕಾರ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆ ಕರೆದು ಕೊರೊನಾ ನಿಯಂತ್ರಣ ಮಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ನೆರೆಯ ಕೇರಳ ರಾಜ್ಯ ಕೊರೊನಾ ನಿಯಂತ್ರಣ ಮಾಡುವಲ್ಲಿ ಉತ್ತಮ ನಿರ್ವಹಣೆ ಮಾಡಿದೆ. ರಾಜ್ಯ ಸರ್ಕಾರ ಕೂಡ ಇದೇ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣಕ್ಕೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಕಳೆದ ಮೂರು ತಿಂಗಳಿಂದ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸಮರ್ಪಕವಾಗಿ ವೇತನ ನೀಡಿಲ್ಲ. ಸರ್ಕಾರದ ವೈಫಲ್ಯತೆಯನ್ನೇ ಖಾಸಗಿ ಆಸ್ಪತ್ರೆಯವರು ದುರುಪಯೋಗಪಡಿಸಿಕೊಂಡು ಲೂಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
key words : Who-Minister-Health? Former-MP R.Dhruvanarayan