ಬೆಂಗಳೂರು, ಜೂನ್ 19, 2021 (www.justkannada.in): ಪ್ರಧಾನಿ ನರೇಂದ್ರ ಮೋದಿ ಜೂನ್ 24ರಂದು ಜಮ್ಮು ಮತ್ತು ಕಾಶ್ಮೀರದ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಸಭೆ ನಡೆಸಲಿದ್ದಾರೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಸುವುದೂ ಸೇರಿದಂತೆ ರಾಜಕೀಯ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರದ ಇತರ ಕೆಲವು ನಾಯಕರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಜೆಕೆಎಪಿ ಪಕ್ಷದ ಅಲ್ತಾಫ್ ಬುಕಾರಿ ಮತ್ತು ಪೀಪಲ್ಸ್ ಕಾನ್ಫರೆನ್ಸ್ನ ಸಜ್ಜದ್ ಲೋನ್ ಅವರಿಗೆ ಸಭೆಗೆ ಆಹ್ವಾನ ನೀಡುವ ಪ್ರಕ್ರಿಯೆ ಆರಂಭವಾಗಿದೆ.