ಮೈಸೂರು,ಜನವರಿ,11,2022(www.justkannada.in): ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮಾಸ್ಕ್ ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಇನ್ಮುಂದೆ ಯಾರಾದರೂ ಮಾಸ್ಕ್ ಧರಿಸದೇ ರಸ್ತೆಗಿಳಿದರೇ ಜೇಬಿಗೆ ಬೀಳುತ್ತೆ ಕತ್ತರಿ.
ಹೌದು, ಮೈಸೂರಿನಲ್ಲಿ ಕೊರೊನಾ ಆತಂಕ ಹೆಚ್ಚಾಗಿದ್ದು, ನಗರ ಪಾಲಿಕೆ ಅಧಿಕಾರಿಗಳು ಮಾಸ್ಕ್ ತಪಾಸಣೆ ನಡೆಸಲು ಮುಂದಾಗಿದ್ದಾರೆ. ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿ ರಸ್ತೆಗಳಿದವರಿಗೆ ದಂಡ ವಿಧಿಸಲಾಗುತ್ತಿದೆ. ನಗರದ ಮಾನಸಗಂಗೋತ್ರಿ, ಮಾರುಕಟ್ಟೆ, ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿ ಎಂದರೂ ಜನ ನಿರ್ಲಕ್ಷ್ಯ ತೋರುತ್ತಿದ್ದು ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಹಕಾರದೊಂದಿಗೆ ಮಾಸ್ಕ್ ಇಲ್ಲದೇ ಓಡಾಡುವವರನ್ನ ತಡೆದು ಪರಿಶೀಲನೆ ನಡೆಸಲಾಗುತ್ತಿದೆ. ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ವ್ಯಕ್ತಿಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದು, ಕೊರೊನಾ ನಿಯಂತ್ರಣ ನಿಯಮ ಪಾಲಿಸದಿದ್ರೆ ಗ್ಯಾರಂಟಿ ಜೇಬಿಗೆ ಬೀಳುತ್ತೆ ಕತ್ತರಿ.
ಕೋವಿಡ್ ಕೇರ್ ಸೆಂಟರ್ ಸಿದ್ದತೆ ಪರಿಶೀಲನೆ.
ಮೈಸೂರಿನಲ್ಲಿ ಕೊರೋನ ಪ್ರಕರಣಗಳ ಹೆಚ್ಚಳ ಹಿನ್ನೆಲೆ, ಇಂದು ಕೋವಿಡ್ ಕೇರ್ ಸೆಂಟರ್ ಗಳಿಗೆ ಮೈಸೂರು ಮಹಾನಗರ ಪಾಲಿಕೆ ತಂಡ ಭೇಟಿ ನೀಡಿ ಕೋವಿಡ್ ಕೇರ್ ಸೆಂಟರ್ ಸಿದ್ದತೆ ಪರಿಶೀಲನೆ ನಡೆಸಿತು. ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ನೇತೃತ್ವದಲ್ಲಿ ಬೋಗಾದಿಯ ಬಿಸಿಎಂ ಹಾಸ್ಟೆಲ್ ಪಂಚಕರ್ಮ ಆಸ್ಪತ್ರೆಗೆ ಭೇಟಿ ನೀಡಿ ಬೆಡ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ, ಅಡುಗೆ ಸಿಬ್ಬಂದಿ, ಸೂಕ್ತ ಸ್ವಚ್ಚತಾ ಸಿಬ್ಬಂದಿ ನಿಯೋಜನೆಗೆ ಸೂಚನೆ ನೀಡಲಾಯಿತು.
ಪ್ರಕರಣಗಳು ಹೆಚ್ಚಾದಂತೆ ಮತ್ತಷ್ಟು ಬೆಡ್ ವಿಸ್ತರಣೆಗೆ ಚಿಂತನೆ ನಡೆಸಿದ್ದು, ಆಕ್ಸಿಜನ್ ಕೊರತೆ ಬಾರದಂತೆ ಪಾಲಿಕೆ ಮುಂಜಾಗ್ರತಾ ವಹಿಸಿದೆ.
Key words: without -mask –Mysore-fine