ನವದೆಹಲಿ,ಸೆಪ್ಟಂಬರ್,22,2023(www.justkannada.in): ಮಹಿಳಾ ಮೀಸಲಾತಿ ಮಸೂದೆ ಹೊಸ ಪ್ರಜಾಪ್ರಭುತ್ವದ ಬದ್ಧತೆಯ ಪ್ರತೀಕ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.
ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾದ ಹಿನ್ನಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ಮೋದಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಪೂರ್ಣ ಬಹುಮತದೊಂದಿಗೆ ಬಿಲ್ ಅಂಗೀಕಾರವಾಗಿದ್ದಕ್ಕೆ, ದೇಶದ ಎಲ್ಲ ತಾಯಂದಿಯರು, ಸೋದರಿಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಇಂಥಹ ಐತಿಹಾಸಿಕ ನಿರ್ಣಯ ತೆಗೆದುಕೊಳ್ಳುವ ಅವಕಾಶ ಬಿಜೆಪಿಗೆ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಮಹಿಳಾ ಮೀಸಲಾತಿ ಬಿಲ್ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
Key words: Women- reservation bill – symbol of commitment – new democracy – PM Modi.