ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿ: ಜನ ಸಂಪರ್ಕ ಸಭೆ ನಡೆಸಿ ಜನರಿಗೆ ಸ್ಪಂದಿಸಿ-ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ.

ಬೆಂಗಳೂರು ಸೆಪ್ಟಂಬರ್,12,2023(www.justkannada.in):  ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಿದರು.

ಕೇವಲ ಬದಲಾವಣೆಗಾಗಿ ನಾಡಿನ ಜನತೆ ಸರ್ಕಾರವನ್ನು ಬದಲಾಯಿಸಿಲ್ಲ. ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರವನ್ನು ಬದಲಾಯಿಸಿ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಅಭಿವೃದ್ಧಿಯ ಆಶೋತ್ತರಗಳನ್ನು ಇಟ್ಟುಕೊಂಡ ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಶಾಸಕರು, ಮಂತ್ರಿಗಳು, ಅಧಿಕಾರಿಗಳು ಜನ ಸೇವಕರು. ಈ ಸಾಮಾನ್ಯ ತಿಳಿವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ನಾವ್ಯಾರು ರಾಜರುಗಳಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳನ್ನು ಹೊತ್ತುಕೊಂಡು ಜನ ನನ್ನ ಬಳಿ ಬರುತ್ತಿದ್ದಾರೆ. ನೀವು ಸ್ಥಳೀಯವಾಗಿ ಜನ ಸಂಪರ್ಕ ಸಭೆ ನಡೆಸಿ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ. ಕೆಲವೊಂದು ಸಮಸ್ಯೆಗಳಿಗೆ ವಾರದ ಕಾಲ ಮಿತಿಯಲ್ಲಿ ಪರಿಹಾರ ಒದಗಿಸಿ ಕೊಡಿ. ಕೆಲಸ ಆಗಿದೆಯಾ , ಇಲ್ಲವಾ ಎನ್ನುವುದನ್ನು ಮರು ಪರೀಕ್ಷಿಸಿ. ಆಗ ಸ್ಥಳೀಯ ಸಮಸ್ಯೆಗಳಿಗಾಗಿ ಜನತೆ ಬಸ್ ಚಾರ್ಜ್ ಖರ್ಚು ಮಾಡಿಕೊಂಡು ನನ್ನ ತನಕ ಬರುವ ಅಗತ್ಯವೇ ಬೀಳುವುದಿಲ್ಲ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Key words: Work –efficiency- honesty- public relations- meetings – CM- Siddaramaiah -officials

ENGLISH SUMMARY…

Officials should work efficiently and honestly to meet the expectations of the people of the state

Government means trust. Do remember it is “trust” of the people

If you don’t respond to local issues – the people will approach me

DCs, CEOs,Tehsildars should hold meetings with public and respond to them: Clear instructions by Chief Minister Siddaramaiah

Bengaluru Sep 12: Chief Minister Siddaramaiah gave clear instruction to DCs and Zilla Panchayat CEOs to invite Ministers and MLAs to hold public meetings at taluk level once a week and respond to their grievances.

He was speaking at the meeting of District Commissioners and Zilla Panchayat Chief Executive Officers held today in the conference hall of Vidhana Soudha.

The CM questioned the District Collectors that if people come to me for small problems, then what is the use of you being present there.

I have visited many districts after becoming Chief Minister. There I saw common people giving me hundreds of requests. People are coming to me with problems that need to be solved at the district and taluk level. This would not have happened if you had held public meetings locally and provided solutions to them instantly.

Provide solutions for some issues within a week. Recheck whether the issue is solved. Then people need not come to me for local problems spending bus fare, he said.

Deputy Chief Minister D.K. Shivakumar, other members of the Cabinet, Chief Secretary to the Government and senior officials of the Government attended the meeting.

Chief Minister’s Opening Remarks

The people of the state did not replace the government just for the sake of change. They replaced the previous government with high expectations and brought us to power.

Officers should work according to the expectations of the people aspiring development

MLAs, ministers, officials are public servants. Everyone should have this common sense. We are not kings.

Box

Government will never tolerate delay in justice: strict action awaits

It has been observed that applications coming to the courts of Tehsildar, Sub-Divisional Officer and District Commissioners are pending for more than 5 years. If the case is not settled even after 5 years, it means that you are not working properly.

Justice delayed is justice denied – the longer the delay, the more opportunity for corruption.Delay is also corruption.

Tehsildar should dispose anl application within three months. There is a long delay in the settlement of appeals coming to the Sub-Divisional Officers. It should be resolved in at least six months. DCs should resolve the cases within one year. District Collectors should not unnecessarily adjourn the case, keep the parties waiting or make delay in giving the judgment after hearing the arguments. Our government will not tolerate any delay in clearing the case and will take strict action.