ಸರ್ಕಾರಿ ಯೋಜನೆಗಳು ಪರಿಣಾಮಕಾರಿಯಾಗಿ ತಲುಪಲು ಕ್ರಿಯಾಶೀಲತೆಯಿಂದ ಕೆಲಸ ಮಾಡಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಜುಲೈ,8:,2024 (www.justkannada.in): ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಬೇಕಾದರೇ  ಡಿಸಿ, ಎಸ್​ಪಿ, ಸಿಇಒಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದು ಸಿಎಂ   ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ಡಸಿ ಮತ್ತು ಗ್ರಾಮಪಂಚಾಯತ್ ಸಿಇಒಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಸಿಎಂ ಸಿದ್ದರಾಯ್ಯ,  ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣ ಮಾಡಲು ಕೆಲಸ ಮಾಡಿ. ಡಿಸಿ, ಸಿಇಒಗಳು, ತಮ್ಮ ಜಿಲ್ಲೆಯ ಸಮಗ್ರ ಮಾಹಿತಿಗಳನ್ನು ಅಂಗೈಯಲ್ಲಿ ಇಟ್ಟುಕೊಂಡು ಉತ್ಸಾಹದಿಂದ ಕೆಲಸ ಮಾಡಬೇಕು. ಆಗ ಮಾತ್ರ ಪ್ರಗತಿ ಮತ್ತು ಅಭಿವೃದ್ಧಿಯ ವೇಗ ಕಾಣಲು ಸಾಧ್ಯ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ. ಕರ್ನಾಟಕ ಗುಡ್ ಗೌರ್ನೆನ್ಸ್​ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮಗಳ ಮೇಲಿದೆ ಎಂದು ಸೂಚಿಸಿದರು.

 ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸರಿಯಾಗಿ ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ? DC, CEOಗಳು ಇರೋದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು Forward ಮಾಡಿ ಮುಚ್ಚಳಿಕೆ ಕೊಟ್ಟು ಕೈ ತೊಳೆದುಕೊಳ್ಳೋಕಾ? ಪರಿಹಾರ ಕೊಡಿಸುವವರು ಯಾರು? ಇದಕ್ಕೇನಾ ನೀವು ಇರೋದು ಎಂದು  ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನ ತರಾಟೆಗೆ ತೆಗೆದು ಕೊಂಡರು.

ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. PDOಗಳು, VAಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ DC, CEOಗಳು ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.

Key words: Work, proactively, government, projects, CM Siddaramaiah