ಬೆಂಗಳೂರು, ಅಕ್ಟೋಬರ್ 22, 2023 (www.justkannada.in): ವಿಶ್ವಕಪ್’ನಲ್ಲಿ ಇಂದು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.
ಈ ಪಂದ್ಯ ಧರ್ಮಶಾಲಾದ ಎಚ್’ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇಲ್ಲಿನ ಪಿಚ್ ವೇಗದ ಬೌಲರ್’ಗಳಿಗೆ ಈ ಮೈದಾನ ಸಹಾಯ ಮಾಡಲಿದೆ. ಇನ್ನು ಬ್ಯಾಟ್ಸ್’ಮನ್’ಗಳಿಗೂ ಈ ಮೈದಾನ ಉತ್ತಮವಾಗಿದೆ.
ಅಂದಹಾಗೆ ಈ ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ಮತ್ತು ಭಾರತ ಎರಡೂ ತಮ್ಮ ಮೊದಲ ನಾಲ್ಕು ಪಂದ್ಯಗಳನ್ನು ಗೆದ್ದಿವೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಇದುವರೆಗೆ ಯಾವೊಂದು ತಂಡದ ವಿರುದ್ಧವೂ ಸೋಲು ಕಂಡಿಲ್ಲ.
ಉತ್ತಮ ನೆಟ್ ರನ್ ರೇಟ್ನಿಂದಾಗಿ, ನ್ಯೂಜಿಲೆಂಡ್ ಅಂಕಪಟ್ಟಿಯಲ್ಲಿ ನಂಬರ್-1 ಮತ್ತು ಭಾರತವು ಅಂಕಪಟ್ಟಿಯಲ್ಲಿ 2 ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ನ್ಯೂಜಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ ಮತ್ತು ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಮ್ಯಾಟ್ ಹೆನ್ರಿ.