ಬೆಂಗಳೂರು, ಅಕ್ಟೋಬರ್ 19, 2023 (www.justkannada.in): ವಿಶ್ವಕಪ್ ಕ್ರಿಕೆಟ್ ಪಂದ್ಯಗಳಿಗಾಗಿ ‘ನಮ್ಮ ಮೆಟ್ರೋ‘ದಿಂದ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.
ಹೌದು. ಅಕ್ಟೋಬರ್ 20, 26 ಹಾಗೂ ನವೆಂಬರ್ 4, 9, 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ.
ಪಂದ್ಯಾವಳಿಯ ದಿನದಂದು ರಿಟರ್ನ್ ಜರ್ನಿ ಟಿಕೆಟ್ಗಳನ್ನು ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಬೆಳಗ್ಗೆ 7 ರಿಂದ ಪಡೆಯಬಹುದು.
ರಿಟರ್ನ್ ಟಿಕೆಟ್ ಬೆಲೆ 50 ರೂ. ಇರಲಿದೆ. ಸಾಮಾನ್ಯ ದರದಲ್ಲಿ 5ರಷ್ಟು ರಿಯಾಯಿತಿ ಇರಲಿದೆ. ಈ ಟಿಕೆಟನ್ನು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆಯ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಸಂಜೆ 4 ಗಂಟೆ ನಂತರ ಒಂದು ಪ್ರಯಾಣ ಮಾಡಬಹುದಾಗಿದೆ.
ಕ್ಯೂಆರ್ ಕೋಡ್ ಟಿಕೆಟ್ ಖರೀದಿಸಿದರೆ, ಪಂದ್ಯಗಳು ನಡೆಯುವ ದಿನಗಳಂದು ಪ್ರಯಾಣಿಸಬಹುದು.