ಲಂಡನ್, ಜೂನ್ 13, 2019 (www.justkannada.in): ಐಸಿಸಿ ವಿಶ್ವಕಪ್ 2019 ರ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ.
ಈ ಬಾರಿಯ ವಿಶ್ವಕಪ್ ನಲ್ಲಿ ಭಾರತ ತಾನಾಡಿದ ಎರಡೂ ಪಂದ್ಯಗಳಲ್ಲಿ ಭರ್ಜರಿ ಗೆಲವು ಸಾಧಿಸಿದ್ದು, ಇಂದಿನ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಗಾಯಗೊಂಡಿರುವ ಹಿನ್ನೆಲೆಯಲ್ಲಿ ಶಿಖರ್ ಧವನ್ ಕನಿಷ್ಠ ಮೂರು ಪಂದ್ಯಗಳಿಂದ ಹೊರಗುಳಿಯುವಂತಾಗಿದೆ.
ಕೆ.ಎಲ್. ರಾಹುಲ್ ಆರಂಭಿಕನಾಗಿ ಆಡುವುದು ಬಹುತೇಕ ಖಚಿತಗೊಂಡಿದೆ. ಹಾಗೆಯೇ ನಾಲ್ಕನೇ ಕ್ರಮಾಂಕಕ್ಕೆ ವಿಜಯ್ ಶಂಕರ್ ಮತ್ತು ದಿನೇಶ್ ಕಾರ್ತಿಕ್ ನಡುವೆ ಪೈಪೋಟಿ ಏರ್ಪಟ್ಟಿದೆ. ವಿಶ್ವಕಪ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡವು ಈವರೆಗೆ ಆಡಿರುವ ಮೂರು ಪಂದ್ಯಗಳಲ್ಲೂ ಗೆದ್ದು ಬೀಗಿದೆ.
ಶ್ರೀಲಂಕಾ ವಿರುದ್ಧ ಮೊದಲ ಪಂದ್ಯದಲ್ಲಿ 7 ವಿಕೆಟ್ ಗಳ ಗೆಲುವು ಸಾಧಿಸಿದರೆ, 2 ನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸಿದೆ. ಹಾಗೆಯೇ ಅಫ್ಘಾನಿಸ್ತಾನದ ವಿರುದ್ದ ಮೂರನೇ ಪಂದ್ಯದಲ್ಲಿ 106 ರನ್ ಗಳ ಗೆಲುವು ಸಾಧಿಸಿತ್ತು.