ಕಾರ್ಡಿಫ್: , ಜೂನ್ 01, 2019 (www.justkannada.in): ವಿಶ್ವಕಪ್ ಟೂರ್ನಿಯ ಮೂರನೇ ಪಂದ್ಯ ಇಂದು ನಡೆಯಲಿದ್ದು, ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ಮುಖಾಮುಖಿಯಾಗುತ್ತಿವೆ.
ಕೇನ್ ವಿಲಿಯಮ್ಸನ್ ನೇತೃತ್ವದ ಕಿವೀಸ್ ಪಡೆ ಯುವ ಹಾಗೂ ಅನುಭವಿ ಆಟಗಾರರನ್ನು ಹೊಂದಿದೆ. ಈ ತಂಡಕ್ಕೆ ಹೋಲಿಸಿದರೆ ಶ್ರೀಲಂಕಾ ಪಡೆ ಅಷ್ಟು ಸಮರ್ಥವಾಗಿಲ್ಲ ಅನ್ನಿಸುತ್ತೆ. ಕಳೆದ ವಿಶ್ವಕಪ್ನಲ್ಲಿ ರನ್ನರ್ ಅಪ್ ಆಗಿದ್ದ ನ್ಯೂಜಿಲೆಂಡ್ ಈ ಬಾರಿ ಕಪ್ ಗೆಲ್ಲುವ ಗುರಿ ಇಟ್ಟುಕೊಂಡಿದೆ.
ಉಬಯ ತಂಡಗಳಿಗೂ ಈ ಟೂರ್ನಿಯ ಮೊದಲ ಪಂದ್ಯವಾಗಿದ್ದು, ಎರಡೂ ತಂಡಗಳು ಗೆಲ್ಲುವ ಹುಮ್ಮಸ್ಸಿನಿಂದಲೇ ಕಣಕ್ಕಿಳಿಯಲಿವೆ.
ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್, ಟ್ರೆಂಟ್ ಬೌಲ್ಟ್, ಕಾಲಿನ್ ಡಿ ಗ್ರ್ಯಾಂಡ್ಹೋಮ್, ಲೂಕಿ ಫರ್ಗ್ಯುಸನ್, ಮಾರ್ಟಿನ್ ಗಪ್ಟಿಲ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಕಾಲಿನ್ ಮನ್ರೊ, ಜಿಮ್ಮಿ ನಿಶಾಮ್, ಹೆನ್ರಿ ನಿಕೋಲ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ರಾಸ್ ಟೇಲರ್.
ಶ್ರೀಲಂಕಾ: ದಿಮುತ ಕರುಣಾರತ್ನೆ (ನಾಯಕ), ಧನಂಜಯ್ ಡಿ ಸಿಲ್ವಾ, ಅವಿಷ್ಕಾ ಫರ್ನಾಂಡೊ, ಸುರಂಗ ಲಕ್ಮಲ್, ಲಸಿತ್ ಮಲಿಂಗ, ಏಂಜೆಲೊ ಮ್ಯಾಥ್ಯೂಸ್, ಕುಶಾಲ್ ಮೆಂಡಿಸ್, ಜೀವನ್ ಮೆಂಡಿಸ್, ಕುಶಾಲ್ ಪರೇರ, ತಿಸಾರ ಪೆರೆರ, ನುವಾನ ಪ್ರದೀಪ್, ಮಿಲಿಂದ್ ಸಿರಿವರ್ಧನ, ಲಾಹಿರು ತಿರುಮನ್ನೆ, ಇಸುರು ಉಡಾನ, ಜೆಫ್ರಿ ವಾಂಡರ್ಸೆ.