ನಾಳೆ ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಸಿಎಂ, ಜನಪ್ರತಿನಿಧಿಗಳು ಭಾಗಿ

ಮೈಸೂರು ಸೆಪ್ಟಂಬರ್, 26,2024 (www.justkannada.in): ಸೆಪ್ಟಂಬರ್ 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನಡೆಯುವ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಹಾಗೂ ಎಲ್ಲಾ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರವಾಸೋದ್ಯಮ ಮತ್ತು ಶಾಂತಿ ”ಘೋಷವಾಕ್ಯದಡಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಅಂದು ವಿವಿಧ ಕಲಾತಂಡಗಳ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಕಾರ್ಯಕ್ರಮದಲ್ಲಿ  ಬಿಳಿಯ ವಸ್ತ್ರದಲ್ಲಿ  ಮೈಸೂರಿನ ಸಂಘ ಸಂಸ್ಥೆಗಳು, ಸರ್ವ ಧರ್ಮಗಳ ಪ್ರತಿನಿಧಿಗಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಕಲಾ ತಂಡಗಳು ಸೇರಿದಂತೆ ಸುಮಾರು 1000 ಜನ ಭಾಗವಹಿಸಲಿದ್ದಾರೆ.

ಅರಮನೆಯ ವರಾಹ ಹಾಗೂ ಕರಿಕಲ್ಲು ತೊಟ್ಟಿ ದ್ವಾರದ ಮೂಲಕ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಸೆ. 27 ರಂದು ನಾಳೆ ಸಂಜೆ  ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಅರಮನೆಯ ಅಂಬಾ ವಿಲಾಸ ಅರಮನೆಯನ್ನು ದೀಪಾಲಂಕಾರ ಮೂಲಕ ಬೆಳಕಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಕೆ. ಸವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: World Tourism Day,  celebrations, Mysore