ಕುಸ್ತಿಪಟು ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ನವದೆಹಲಿ,ಸೆಪ್ಟಂಬರ್,6,2024 (www.justkannada.in):  ಕುಸ್ತಿಪಟು  ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಮ್ಮುಖದಲ್ಲಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿ, ಮಾತುಕತೆ ನಡೆಸಿದ್ದರು.

ನಂತರ  ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್​ನಿಂದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ  ಚರ್ಚೆಗಳು ಮುನ್ನೆಲೆಗೆ ಬಂದಿತ್ತು. ಇದೀಗ ಇಬ್ಬರು ಸಹ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ.

Key words: Wrestler, Vinesh Pogat, Bajrang Punia, join, Congress