ಹುಬ್ಬಳ್ಳಿ, ಫೆ,24,2020(www.justkannada.in): ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಭಾರಿ ಸುದ್ದಿಯಾಗಿತ್ತು.ಇದೀಗ ಇಂತಹದ್ದೇ ಘಟನೆ ಹುಬ್ಬಳ್ಳಿಯಲ್ಲಿ ಮರುಕಳಿಸಿದೆ.
ಹೌದು ಹುಬ್ಬಳ್ಳಿ ತಾಲ್ಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಶಾಲೆಯ ಗೋಡೆಯ ಮೇಲೆ ದುಷ್ಕರ್ಮಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಬರಹ ಬರೆದಿದ್ದಾರೆ. ಈ ಕೈ ಬರಹದ ಸಂಬಂಧ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ದೂರು ನೀಡಿದೆ.
ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣಾ ಪೊಲೀಸರು ಬುಡರಶಿಂಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.
Key words: Writing -Pakistan Jindabad – Hubli -Government School- Complaint