ಬೆಳಗಾವಿ,ಡಿಸೆಂಬರ್,19,2024 (www.justkannada.in): ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನವರೆಲ್ಲರೂ ನಕಲಿ ಹೋರಾಟಗಾರರು, ಡೋಂಗಿಗಳು ಎಂದು ಕರೆದಿದ್ದಾರೆ.
ನಾವು ನಕಲಿ ಅನುಯಾಯಿಗಳಲ್ಲ. ಸಂವಿಧಾನಕ್ಕೆ ಅಪಮಾನ ಆಗುವ ರೀತಿಯಲ್ಲಿ ನಾವು ನಡೆದುಕೊಂಡಿಲ್ಲ ಕಾಂಗ್ರೆಸ್ ನವರಿಗೆ ಪ್ರತಿಭಟನೆ ನಡೆಸಲು ಯಾವುದೇ ನೈತಿಕತೆ ಇಲ್ಲ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಉತ್ತರ ಕೊಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ. ಹಗರಣದ ಬಣ್ಣಬಯಲಾಗುತ್ತೆ ಅಂತಾ ಸದನದ ದಾರಿ ತಪ್ಪಿಸುತ್ತಿದ್ದಾರೆ ಎಂದು ಯತ್ನಾಳ್ ಗುಡುಗಿದರು,
Key words: MLA, Yatnal, Congress, fake fighters