ಮಂಡ್ಯ,ಫೆಬ್ರವರಿ,15,2025 (www.justkannada.in): ಸ್ನಾನ ಮಾಡಲು ಹೋಗಿ ಇಬ್ಬರು ಯುವತಿಯರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.
ಶೋಭಾ(19), ನದಿಯಾ(23) ಮೃತಪಟ್ಟ ಯುವತಿಯರು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನ ಮಾಡಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಮುತ್ತತ್ತಿಗೆ ದೇವರ ಕಾರ್ಯಕ್ಕೆಂದು ಬಂದಿದ್ದ ಯುವತಿಯರು ಕಾವೇರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Two ,young women, Cauvery River, death