ಮೈಸೂರು,ಮಾರ್ಚ್,25,2025 (www.justkannada.in): ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 30 ರಿಂದ ಮೂರು ದಿನಗಳ ಕಾಲ ಮೈಸೂರು ಅರಮನೆ ಮಂಡಳಿ ವತಿಯಿಂದ ಯುಗಾದಿ ಸಂಗೀತೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ.
ಮೈಸೂರು ಅರಮನೆ ಆವರಣದಲ್ಲಿ ಮಾರ್ಚ್30ರ ಸಂಜೆ 5.30ರಿಂದ ಯುಗಾದಿ ಸಂಗೀತೋತ್ಸವ ಕಾರ್ಯಕ್ರಮ ಆರಂಭವಾಗಲಿದ್ದು, ಮಾರ್ಚ್ 31 ಏಪ್ರಿಲ್ 1ರವರೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಚಾಲನೆ ನೀಡಲಿದ್ದಾರೆ. ಯುಗಾದಿ ಸಂಗೀತೋತ್ಸವದ ದಿನಗಳಂದು ಸಂಜೆ 7ರಿಂದ 9.30ರವರೆಗೆ ಅರಮನೆ ವಿದ್ಯುತ್ ದೀಪಾಲಂಕಾರವಿರಲಿದೆ.
ಸಿಎಂ ಸಿದ್ದರಾಮಯ್ಯ , ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಚಿವ ಕೆ.ವೆಂಕಟೇಶ್, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್, ಶಾಸಕರಾದ ಅನಿಲ್ ಚಿಕ್ಕಮಾದು, ರಮೇಶ್ ಬಂಡಿಸಿದ್ದೇಗೌಡ, ಹರಿಶ್ ಗೌಡ, ಟಿಎಸ್ ಶ್ರೀವತ್ಸ, ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಎಂಎಲ್ ಸಿಗಳಾದ ಹೆಚ್.ವಿಶ್ವನಾಥ್, ಡಿ.ತಿಮ್ಮಯ್ಯ, ಸಿ.ಎನ್ ಮಂಜುನಾಥ್ ಗೌಡ, ಯತೀಂದ್ರ ಸಿದ್ದರಾಮಯ್ಯ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ವಿವರ ಹೀಗಿದೆ…
Key words: Three-day, ‘Yugadi Music Festival’ , Mysore Palace