ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆಬ್ರವರಿ 27,2024(www.justkannada.in): ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ-2024ರಂದು ನೇರ ನಗದು ವರ್ಗಾವಣೆ ಮಾಡಲಾಗಿದೆ.
ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ಮಾಹೆಯ ಕೊನೆಯ ವಾರದೊಳಗಾಗಿ ತಾನು ನಿರುದ್ಯೋಗಿಯೆಂದು. ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿದೆ.
ಪ್ರಸ್ತಕ ಫೆಬ್ರವರಿ ತಿಂಗಳಳ್ಲಿ ದಿನಾಂಕ 29-02-2024 ರವರೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ ಎಂಬುದಾಗಿ ತಿಳಿಸಿದೆ.
ಈಗಾಗಲೇ ನೋಂದಾಯಿಸಿದ ಅಭ್ಯರ್ಥಿಗಳಿಗೆ ಜನವರಿ-2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿದ್ದು ಎಸ್ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗಿದೆ ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in/ ವೆಬ್ಸೈಟ್ ಗೆ ಭೇಟಿ ನೀಡಿ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: yuvanidhi Scheme- Self declaration – mandatory.