ಬೆಂಗಳೂರು, ಫೆಬ್ರವರಿ,17,2025 (www.justkannada.in): ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್ ಗೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಈ ವೇಳೆ ವಾದ ಮಂಡಿಸಿದ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು, ಮುಂದೆ ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದರು.
ಈ ವೇಳೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಬಳಿಕ ಎಲೆಕ್ಷನ್ ನಡೆಸುವುದಾಗಿ ತಿಳಿಸಿದರು. ಮೇ ತಿಂಗಳೊಳಗೆ ಮೀಸಲಾತಿ ಪ್ರಕಟಿಸಲಾಗುತ್ತೆ. ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡಲಾಗುವುದು ಎಂದು ತಿಳಿಸಿದರು. ಈ ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು.
Key words: ZP, TP, election, state government, High Court