ಏಪ್ರಿಲ್, ಮೇ ಅಂತ್ಯದೊಳಗೆ ಜಿ.ಪಂ, ತಾ.ಪಂ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಿಕ್ಸ್

ಬೆಳಗಾವಿ,ಜನವರಿ,13,2025 (www.justkannada.in): ಏಪ್ರಿಲ್, ಮೇ ಅಂತ್ಯದೊಳಗೆ ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ, ಸ್ಥಳೀಯ ಸಂಸ್ಥೆಗಳಿಗೆ  ಚುನಾವಣೆ ನಡೆಯುವ ಸಾಧ್ಯತೆ ಇದೆ.

ಈ ಕುರಿತು ಮಾತನಾಡಿ ಮಾಹಿತಿ ಹಂಚಿಕೊಂಡಿರುವ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗೆ ತಯಾರಿ, ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ ಒಳಗೆ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಏಪ್ರಿಲ್ ಒಳಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯುತ್ತದೆ. ಏಪ್ರಿಲ್, ಮೇ ಒಳಗೆ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಚುನಾವಣಾ ಪ್ರಕ್ರಿಯೆ ಸಂಬಂಧ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯ ಮೀಸಲಾತಿ ಪಟ್ಟಿ ಕೈಸೇರಿದ ಬಳಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದರು.

Key words: ZP, TP,  local body, elections, April, May