ಬೆಂಗಳೂರು,ನವೆಂಬರ್,24,2021(www.justkannada.in): ಕರ್ನಾಟಕ ಕಾನೂನು ವಿಶ್ವ ವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.
ಕಾನೂನು ವಿವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ತಡೆ ನೀಡಿ ಏಕಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿತ್ತು. ಆದೇಶ ಪ್ರಶ್ನಿಸಿ ಕರ್ನಾಟಕ ಕಾನೂನು ವಿವಿಯು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಪರೀಕ್ಷೆಗಳನ್ನ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.
ಪರೀಕ್ಷೆ ನಡೆಸಲು ವಿಶ್ವ ವಿದ್ಯಾಲಯಕ್ಕೆ ಅನುಮತಿ ನೀಡಿರುವ ವಿಭಾಗೀಯ ನ್ಯಾಯಪೀಠ, ಮುಂದಿನ ಆದೇಶದವರಗೆ ಪರೀಕ್ಷಾ ಫಲಿತಾಂಶ ಪ್ರಕಟಿಸಬಾರದು ಎಂದು ನಿರ್ದೇಶಿದೆ.
ಯುಜಿಸಿ ನಿರ್ದೇಶನದ ಅನುಸಾರ ಕೋವಿಡ್ ಸಂದರ್ಭದಲ್ಲಿ ತರಗತಿಗಳು ಸರಿಯಾಗಿ ನಡೆಯದ ಕಾರಣ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್ ಗಳಿಗೆ ಬಡ್ತಿ ನೀಡಬೇಕಿತ್ತು. ಆದರೆ, ವಿವಿ ಪರೀಕ್ಷೆ ನಡೆಸಲು ಮುಂದಾಗಿದೆ. ಈ ಕ್ರಮ ಸರಿಯಲ್ಲ ಎಂದು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ನವೆಂಬರ್ 15ರಿಂದ ನಡೆಯಬೇಕಿದ್ಧ ಕಾನೂನು ವಿವಿ ಸೆಮಿಸ್ಟರ್ ಪರೀಕ್ಷೆಗಳಿಗೆ ಹೈಕೋರ್ಟ್ ಏಕಸದಸ್ಯಪೀಠ ತಡೆ ನೀಡಿತ್ತು.
Key words: green signal – Karnataka law university- examinations- High court