ಮಂಡ್ಯ,ಸೆಪ್ಟಂಬರ್,4,2023(www.justkannada.in): ಕೆಆರ್ ಎಸ್ ಡ್ಯಾಂ ಭರ್ತಿಯಾಗದೇ ಇಲ್ಲಿನ ರೈತರಿಗೆ ಸಂಕಷ್ಟ ಎದುರಾಗಿದ್ದರೂ ಸಹ ಪಕ್ಕದ ರಾಜ್ಯ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ನೀರು ಹರಿಸಲು ಆದೇಶಿಸಿರವ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ ಮುಂದುವರೆದಿದೆ.
ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿಕಿಚ್ಚು ಮುಂದುವರೆದಿದ್ದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿ ಕಾವೇರಿ ನದಿಗೆ ಇಳಿದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ ಮತ್ತು ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಸರಿಯಾಗಿ ಮಳೆಯಾಗದೇ ಕೆಆರ್ ಎಸ್ ಭರ್ತಿಯಾಗಿಲ್ಲ, ಹೀಗಾಗಿ ರಾಜ್ಯದ ಕಾವೇರಿ ಜಲಾನಯನ ಪ್ರದೇಶದ ರೈತರು ಜನರು ನೀರಿಗೆ ಹಾಹಾಕಾರ ಪಡುವ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಪರಿಸ್ಥಿತಿ ಹೀಗಿದ್ದರೂ ಸಹ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದ್ದು ಈ ಪ್ರಕಾರ ರಾಜ್ಯ ಸರ್ಕಾರ ನೀರು ಹರಿಸುತ್ತಿದೆ. ಇದಕ್ಕೆ ವಿರೋಧಿಸಿ ರೈತರು ವಿವಿಧ ಸಂಘಟನೆಗಳು ಪ್ರತಿಭಟನೆಗಿಳಿದಿವೆ.
Key words: Opposition – release – Cauvery water – Tamil Nadu- Protests -continue.