ಬೆಂಗಳೂರು,ಡಿಸೆಂಬರ್,27,2021(www.justkannada.in): ಒಮಿಕ್ರಾನ್ ಭೀತಿ ಹಿನ್ನೆಲೆ ರಾಜ್ಯದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಕಮಲ್ ಪಂತ್, ಸರ್ಕಾರ ಆದೇಶದಂತೆ ಕಟ್ಟುನಿಟ್ಟಾಗಿ ನೈಟ್ ಕರ್ಫ್ಯೂ ಜಾರಿ ಮಾಡುತ್ತೇವೆ. ಅನಗತ್ಯವಾಗಿ ಯಾರಾದ್ರೂ ಓಡಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎನ್ ಡಿಎಂಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತದೆ. ತುರ್ತು ಸೇವೆ ಪ್ರಯಾಣಿಕರು ಮಾತ್ರ ದಾಖಲೆ ತೋರಿಸಿ ಓಡಾಡಬಹುದು ಎಂದು ತಿಳಿಸಿದ್ದಾರೆ.
ನೈಟ್ ಕರ್ಫ್ಯೂ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಸರ್ಕಾರದ ಆದೇಶದಂತೆ ನಾಳೆಯಿಂದ ನಗರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
Key words: Night curfew- action – walks -unnecessarily -Police Commissioner -Kamal Pant -warns.