ಬೆಂಗಳೂರು,ನವೆಂಬರ್,6,2021(www.justkannada.in): ರಾಜ್ಯದಲ್ಲಿ ಸಾಕಷ್ಟು ಸುದ್ಧಿಯಾಘಿರುವ ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ 5 ಸ್ಟಾರ್ ಹೋಟೆಲ್ನಲ್ಲಿ ಶ್ರೀಕೃಷ್ಣನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀಕಿ ತಂಗಿದ್ದ ಹೋಟೆಲ್ನಲ್ಲಿ ವಿಷ್ಣು ಭಟ್ ಎಂಬಾತ ಆರೋಪಿ ಶ್ರೀಕಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಜೀವನ್ ಭೀಮಾನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಶ್ರೀಕಿ, ಗಲಾಟೆ ಮಾಡಿದ್ದ ವಿಷ್ಣು ಭಟ್ ವಶಕ್ಕೆ ಪಡೆಯಲಾಗಿದೆ.
ಬಿಟ್ ಕಾಯಿನ್ ವಿಚಾರದಲ್ಲಿ ಬೇಕಾಗಿದ್ದ ಆರೋಪಿ ಶ್ರೀಕಿ 2 ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದನು. ಶ್ರೀಕಿ ಎಲ್ಲಿದ್ದಾನೆ ಎಂದು ಯಾರಿಗೂ ಗೊತ್ತಿರಲಿಲ್ಲ. ಇದೀಗ 5 ಸ್ಟಾರ್ ಹೋಟೆಲ್ನಲ್ಲಿ ತಂಗಿದ್ದ ಆರೋಪಿ ಶ್ರೀಕಿ ವಶಕ್ಕೆ ಪಡೆಯಲಾಗಿದೆ.
Key words: Bit Coin –case- Arrest -accused -Krishna -Bangalore