ಬೆಂಗಳೂರು,ಜೂನ್,10,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆ ಈಗಾಗಲೇ ಜಾರಿ ಮಾಡಲಾಗಿರುವ ಲಾಕ್ ಡೌನ್ ಅನ್ನ ಸಡಿಲಗೊಳಿಸುವ ಅನ್ ಲಾಕ್ ಮಾಡುವ ಸಂಬಂಧ ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ಇಂದು ಸರಣಿ ಸಭೆ ನಡೆಸಲಿದ್ದಾರೆ.
ಇಂದು ಬೆಳಿಗ್ಗೆ 11.30 ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ. ಸೋಂಕು ಹೆಚ್ಚಿರುವ ಮೈಸೂರು, ಶಿವಮೊಗ್ಗ, ತುಮಕೂರು, ಹಾಸನ, ದಕ್ಷಿಣ ಕನ್ನಡ ಚಿಕ್ಕಮಗಳೂರು ಸೇರಿ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಿಎಂ ಬಿಎಸ್ ಯಡಿಯೂಪ್ಪ ಸಭೆ ನಡೆಸಿ ಮಾಹಿತಿ ಕಲೆ ಹಾಕಲಿದ್ದಾರೆ.
ನಂತರ ಸಂಜೆ 6 ಗಂಟೆಗೆ ಸಚಿವರ ಜತೆ ಸಭೆ ನಡೆಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದಲ್ಲಿ ಅನ್ ಲಾಕ್ ಮಾಡುವ ಸಂಬಂಧ ಚರ್ಚೆ ನಡೆಸಲಿದ್ದು ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
Key words: corona-unlock- state -CM BS Yeddyurappa- meeting- today.