ಬೆಂಗಳೂರು,ನವೆಂಬರ್,5,2020(www.justkannada.in): ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಆಗ್ರಹಿಸಿದ್ದಾರೆ.
ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ನೌಕರರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಿಷ್ಟು…
5 ಲಕ್ಷದ 40 ಸಾವಿರ ನೌಕರರ ಭಾಗವಾಗಿ ಸಂಘ ಕೆಲಸ ಮಾಡುತ್ತಿದೆ. ನೌಕರರ ಸಂಘವು ಸರ್ಕಾರ ಹಾಗೂ ನೌಕರರ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದೆ. ಪ್ರಕೃತಿ ವಿಕೋಪವಾದರೆ ಮೊದಲು ನೆರವಿಗೆ ಧಾವಿಸುವುದೇ ರಾಜ್ಯ ನೌಕರರ ಸಂಘ . ಸಂಘಕ್ಕೆ ಶತಮಾನದ ಇತಿಹಾಸವಿದೆ. ಇಂತಹ ಒಂದು ಬೃಹತ್ ಸಂಘಟನೆ ರಾಜ್ಯ ಸರ್ಕಾರಿ ನೌಕರರ ಸಂಘ. ಒಂದು ವರ್ಷದ ಅವಧಿಯಲ್ಲಿ 25 30 ವರ್ಷಗಳ ಹಿಂದಿನ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಿದೆ. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಿಂದಿನ ಪಿಂಚಣಿ ಯೋಜನೆ ಜಾರಿ ಮಾಡಬೇಕು ತಪ್ಪಿದ್ದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಜೊತೆಗೆ ಕೇಂದ್ರ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ನೀಡಬೇಕು. ನಗದುರಹಿತ ಉಚಿತ ಚಿಕಿತ್ಸೆಯನ್ನು ನೀಡುವ ಯೋಜನೆಯನ್ನು ಜಾರಿಗೆ ತರಬೇಕು. ಸರ್ಕಾರಿ ನೌಕರರ ಎಲ್ಲಾ ಸವಲತ್ತುಗಳನ್ನು ಆನ್ ಲೈನ್ ಮೂಲಕ ಒದಗಿಸಲು ಸಾಫ್ಟ್ವೇರ್ ಸಿದ್ಧಪಡಿಸಿ ನಿಟ್ಟಿನಲ್ಲಿ ಸಂಘವು ಕಾರ್ಯೋನ್ಮುಖವಾಗಿದೆ. ಇದರಿಂದ ನೌಕರರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ಶೀಘ್ರದಲ್ಲೇ ಎಲ್ಲಾ ಸೌಲಭ್ಯಗಳು ಸಿಗುವಂತಾಗುತ್ತವೆ
ಸಂಘದ ಇತರೆ ಪದಾಧಿಕಾರಿಗಳ ಆರೋಪಗಳಿಗೆ ಸ್ಪಷ್ಟನೆ ನೀಡಿದ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ರಾಮು, ಸಂಘದ ಕೆಲ ಪದಾಧಿಕಾರಿಗಳು ನನ್ನ ವಿರುದ್ಧ ಏತಕ್ಕಾಗಿ ಆರೋಪ ಮಾಡಿದ್ದಾರೆಂದು ತಿಳಿದಿಲ್ಲ. ಆರೋಪಗಳ ಬಗ್ಗೆ ನಾನೇನು. ಹೆಚ್ಚೇನು ಹೇಳುವುದಿಲ್ಲ . ಎಲ್ಲರಿಗೂ ಅವರದ್ದೇ ಆದ ವಾಕ್ ಸ್ವಾತಂತ್ರ್ಯವಿದೆ. ಅವರಿಗೆ ಆ ರೀತಿಯ ಅಭಿಪ್ರಾಯ ಬಂದಿರಬಹುದು. ಇದುವರೆಗೂ ನೌಕರರಿಗೆ 1200 ನಿವೇಶನಗಳನ್ನು ನೀಡಲಾಗಿದೆ. ನನ್ನ ಅವಧಿಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ. ಹೆಲ್ತ್ ಕ್ಯಾಂಪ್ ಸೇರಿದಂತೆ ಹಲವು ನೌಕರರ ಪರವಾದ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದೇನೆ. ಸಭೆಗಳಲ್ಲಿ ಎಲ್ಲರ ಜೊತೆ ಚರ್ಚಿಸಿಯೇ ನಿರ್ಧಾರ ತೆಗೆದುಕೊಳ್ಳಲಾಗುತ್ತಿತ್ತೇ ವಿನಃ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿಲ್ಲ. ಸಮಸ್ಯೆಗಳು ಏನೇ ಇದ್ದರೂ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳುತ್ತೇವೆ